ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರ ಭೇಟಿ…

ಮಂಗಳೂರು: ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ರಾದ ಟಿ ಎಂ ಶಾಹಿದ್ ತೆಕ್ಕಿಲ್ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹಾಗೂ ಅಪರ ಜಿಲ್ಲಾಧಿಕಾರಿ ರಾಜು ತವರನ್ನು ಬೇಟಿಯಾಗಿ ಸಂಪಾಜೆ ಗ್ರಾಮದ ಅಭಿವೃದ್ಧಿಗೆ ಮಳೆ ಯೋಜನೆಯಡಿ ಅನುದಾನ ಹಾಗೂ ಸಂಪಾಜೆ ಗ್ರಾಮದಲ್ಲಿ ಮರಳಿನ ಕೊರತೆಯಿಂದಾಗಿ ಗ್ರಾಮದಲ್ಲಿ ರಸ್ತೆ ಕಾಂಕ್ರಿಟ್ ಕಾಮಗಾರಿ, ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಹಲವು ಕಾಮಗಾರಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಗಮನಕ್ಕೆ ತರಲಾಯಿತು.
ಅಪರ ಜಿಲ್ಲಾಧಿಕಾರಿಯವರು ತಕ್ಷಣ ಸ್ಪಂದಿಸಿ ಗಣಿ ಇಲಾಖೆಯ ಅಧಿಕಾರಿಗಳ ಜೊತೆ ಫೋನ್ ಮೂಲಕ ಸಂಪರ್ಕಿಸಿ ಸುಳ್ಯ ತಾಲೂಕಿನ ಮರಳು ಬ್ಲಾಕ್ ಬಗ್ಗೆ ಮಾಹಿತಿ ಪಡೆದರು. ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಜಿ ಕೆ ಹಮೀದ್ ಗೂನಡ್ಕ, ಸುಂದರಿ ಮುಂಡಡ್ಕ, ಸದಸ್ಯರಾದ ವಿಮಲಾ ಪ್ರಸಾದ್ ಉಪಸ್ಥಿತರಿದ್ದರು.