ಯಕ್ಷಾಂಗಣ ತಾಳಮದ್ದಳೆ ಸಪ್ತಾಹದ ಪೋಸ್ಟರ್ ಬಿಡುಗಡೆ…
ಮಂಗಳೂರು: ಮಂಗಳೂರು ವಿ.ವಿ.ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ನವೆಂಬರ್ 23 ರಿಂದ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಸುವ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ – 2025’ ಹದಿಮೂರನೇ ವರ್ಷದ ನುಡಿಹಬ್ಬ ಕಾರ್ಯಕ್ರಮದ ವರ್ಣರಂಜಿತ ಪೋಸ್ಟರನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.
ಯಕ್ಷಾಂಗಣದ ಗೌರವಾಧ್ಯಕ್ಷ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ|ಎ.ಜೆ. ಶೆಟ್ಟಿ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ‘ಕಳೆದ ಹನ್ನೆರಡು ವರ್ಷಗಳಿಂದ ವಿಶೇಷವಾಗಿ ನವೆಂಬರ್ ತಿಂಗಳಲ್ಲಿ ನುಡಿ ಹಬ್ಬ ರೂಪದಲ್ಲಿ ನಡೆಸುವ ಯಕ್ಷಾಂಗಣದ ಸಪ್ತಾಹ ಯಶಸ್ವಿಯಾಗುವಲ್ಲಿ ಕಾರ್ಯ ಕರ್ತರ ಪಾತ್ರ ಬಹಳ ದೊಡ್ಡದು’ ಎಂದವರು ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮದ ರೂಪು ರೇಷೆಗಳ ವಿವರ ನೀಡಿದರು. ಉಪಾಧ್ಯಕ್ಷ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಸಂಚಾಲಕಿ ನಿವೇದಿತಾ ಎನ್. ಶೆಟ್ಟಿ ಹಾಗೂ ಕಾರ್ಯದರ್ಶಿಗಳಾದ ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ಮತ್ತು ಸುಮಾ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶರವು ಕ್ಷೇತ್ರ ಭೇಟಿ:
ಯಕ್ಷಾಂಗಣದ ಪದಾಧಿಕಾರಿಗಳು ಕಾರ್ಯಕ್ರಮ ನಿಮಿತ್ತ ಮಂಗಳೂರಿನ ಶರವು ಶ್ರೀ ಶರಭೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಿಲೆ ಶಿಲೆ ಆಡಳಿತ ಮೊಕ್ತೇಸರ ಶರವು ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮನವಿ ಪತ್ರವನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.





