ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಜಂಪ್ ರೋಪ್ ಪಂದ್ಯಾಟ ಚಾಲನೆ…
ಕ್ರೀಡೆಯಿಂದ ವಿದ್ಯಾರ್ಥಿಗಳ ಮಾನಸಿಕ-ದೈಹಿಕ ವಿಕಸನ ಸಾಧ್ಯ: ಟಿ.ಎಂ.ಶಹೀದ್ ತೆಕ್ಕಿಲ್ ...
ಸುಳ್ಯ: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೊಡಗಿಸಿಕೊಂಡು ತಮ್ಮ ಅಮೂಲ್ಯ ಸಮಯಗಳನ್ನು ವ್ಯರ್ಥ ಮಾಡುವ ಸಮಯವನ್ನು ನಾನಾ ರೀತಿಯ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.
ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನ.22 ರಂದು ನಡೆದ ಜಿಲ್ಲಾಮಟ್ಟದ ಜಂಪ್‌ರೋಪ್ ಪಂದ್ಯಾಟವನ್ನು ದೀಪಬೆಳಗಿಸಿ, ಉಧ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಕ್ರೀಡೆಗಳು ಸೇರಿದಂತೆ ಇಂತಹ ಅನೇಕ ರೀತಿಯ ಕ್ರೀಡೆಗಳಿಗೆ ಒತ್ತು ನೀಡುವ ಅಗತ್ಯತೆ ಇದೆ. ಗ್ರಾಮೀಣ ಪ್ರದೇಶದ ಹಲವಾರು ಕ್ರೀಡಾಕೂಟ ನಶಿಸಿದೆ. ಕೆಲವು ಬಾಗದಲ್ಲಿ ಪುನ ಹಳೆ ಕ್ರೀಡಾಕೂಟ ನಡೆಯುತ್ತಿದ್ದು ವಿದ್ಯಾರ್ಥಿಗಳು -ಹಿರಿಯರು ದಿನದಲ್ಲಿ ಕನಿಷ್ಠ ಒಂದು ಘಂಟೆ ಯಾವುದಾದರೊಂದು ರೀತಿಯ ಕ್ರೀಡೆಯಲ್ಲಿ ಭಾಗವಹಿಸಿ ಅಥವಾ ವ್ಯಾಯಾಮ ಮಾಡಿ ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, 1992ರ ನಂತರ ಸುಳ್ಯ ತಾಲೂಕಿನಲ್ಲಿ ಯಾವುದೇ ರೀತಿಯ ಕೋಮಗಲಭೆ ನಡೆದಿಲ್ಲ. ಇದಕ್ಕೆ ಕಾರಣ ಸುಳ್ಯ ತಾಲೂಕಿನ ಮಣ್ಣಿನಲ್ಲಿ ನಡೆಯುವ ಸಾಂಸ್ಕೃತಿಕ ಮತ್ತು ಕ್ರೀಡಾಚಟುವಟಿಕೆಗಳು. ಇಲ್ಲಿ ಸಂಘಟನೆ ಮೂಲಕ ನಡೆದಾಗ ಯಾವುದೇ ರೀತಿಯ ದ್ವೇಷ, ವೈಶಮ್ಯಗಳು ಉದ್ಭವವಾಗುತ್ತಿಲ್ಲ. ದ.ಕ ಜಿಲ್ಲೆಯ ಒಳಗೆ ನಡೆದರೂ ಸುಳ್ಯ ತಾಲೂಕಿನಲ್ಲಿ ಯಾವುದೇ ರೀತಿಯ ಘಟನೆಗಳು ನಡೆಯುದಿಲ್ಲ ಎಂದರು.
ಸುಳ್ಯ ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ, ಕಾರ್ಯಕ್ರಮಕ್ಕೆ ಶುಭಹಾರೈಸಿ, ಇಂತಹ ಕ್ರೀಡಾ ಸ್ಪರ್ಧೇಗಳು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿ, ಶುಭಹಾರೈಸಿದರು.
ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಜಯರಾಮ ರೈ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಗಂಗಾಧರ ಕಾಳಮನೆ, ಜಾಲ್ಸೂರು ಗ್ರಾ.ಪಂ.ಸದಸ್ಯ ಬಾಬು ಕೆ.ಎಂ., ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ, ಸುಳ್ಯ ತಾಲೂಕು ಗ್ರೇಡ್-೧ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ಇದ್ದರು. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಭುವನೇಶ್, ಸುಳ್ಯ ತಾಲೂಕು ಪಿ.ಎಂ.ಪೋ಼ಷಣ್ ನಿರ್ದೇಶಕರಾದ ವೀಣಾ ಎಂ.ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶೀಥಲ್ ಯು.ಕೆ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ ವಂದಿಸಿದರು. ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇರ್ಕಜೆ ಕಾರ್ಯಕ್ರಮ ನಿರೂಪಿಸಿದರು.




