ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾರವಾರ ಉಸ್ತುವಾರಿಯಾಗಿ ಟಿ. ಎಂ ಶಾಹೀದ್ ತೆಕ್ಕಿಲ್ ನೇಮಕ…
ಬೆಂಗಳೂರು: ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರನ್ನು ದಿನಾಂಕ 11/11/2026 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನೂಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇಮಕಮಾಡಿದ್ದಾರೆ. ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 3000 ಹೊಸ ಪದವೀಧರ ಹಾಗೂ ಶಿಕ್ಷಕರನ್ನು ಮತದಾರರಾಗಿ ನೋಂದಾವಣೆಯನ್ನು ಮಾಡಲು ಕಾರವಾರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಲು ಅದೇಶಿಸಲಾಗಿದೆ. ಮಂಜುನಾಥ್ ಭಂಡಾರಿ ಕಾರ್ಯಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಹಾಗೂ ಶ್ರೀ ಹರೀಶ್ ಕುಮಾರ್ ಮಾಜಿ ವಿಧಾನ ಪರಿಷತ್ ಸದಸ್ಯರು ಮತ್ತು ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಇವರು ಮೇಲುಸ್ತುವಾರಿ ವಹಿಸಲಿದ್ದಾರೆ. ಟಿ ಎಂ ಶಾಹಿದ್ ತೆಕ್ಕಿಲ್ ಅವರು ರಾಜ್ಯದ ಹಲವಾರು ಜಿಲ್ಲೆಯಲ್ಲಿ ಮತ್ತು ಹಲವಾರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಮತ್ತು ಪಕ್ಷ ಸಂಘಟನೆಯಲ್ಲಿ ದುಡಿದು ಕೇರಳ ರಾಜ್ಯದಲ್ಲಿ ವಿವಿಧ ಚುನಾವಣೆಯಲ್ಲಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ, ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.


