ಧಾರವಾಡ, ಮೈಸೂರು-ಕೌಶಲ್ಯ ತರಬೇತಿ ಕೇಂದ್ರ ಕಟ್ಟಡದ ನೀಲ ನಕ್ಷೆಯ ಪರಿಶೀಲನಾ ಸಭೆ…
ಬೆಂಗಳೂರು: ಕಾರ್ಮಿಕರ ಕನಿಷ್ಠ ವೇತನ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಲಿರುವ ಕೌಶಲ್ಯ ತರಬೇತಿ ಕೇಂದ್ರ ಕಟ್ಟಡದ ನೀಲ ನಕ್ಷೆಯ ಪರಿಶೀಲನಾ ಸಭೆ ಇತ್ತೀಚೆಗೆ ನಡೆಯಿತು.
ವಿಕಾಸ ಸೌಧದಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ವಹಿಸಿದ್ದರು.
ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್, ಕಾರ್ಮಿಕ ಆಯುಕ್ತ ಗೋಪಾಲಕೃಷ್ಣ ಐ ಎ ಎಸ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






