ಟಿ. ಎಂ ಶಾಹೀದ್ ತೆಕ್ಕಿಲ್ ಅವರಿಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನ…
ಪುತ್ತೂರು: ಟಿ. ಎಂ ಶಾಹೀದ್ ತೆಕ್ಕಿಲ್ ಅಧ್ಯಕ್ಷರು ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೆಂಗಳೂರು ಅವರು ಇಂದು ಪುತ್ತೂರಿನ ಪುರಭವನದಲ್ಲಿ ಕರ್ನಾಟಕ ಸರಕಾರ ಬ್ಯಾರಿ ಸಾಹಿತ್ಯ ಅಕಾಡೆಮಿ ( ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ) ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಅಕಾಡೆಮಿಯ ಚಮ್ಮನ (ಗೌರವ ಪುರಸ್ಕಾರ ) ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮ್ಮರ್ ಯು.ಹೆಚ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ, ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾತ್ ಅಧ್ಯಕ್ಷರಾದ ಕೆ. ಪಿ ಮುಹಮ್ಮದ್ ಹಾಜಿ,ನ್ಯಾಯವಾದಿ ನೂರುದ್ದಿನ್ ಸಾಲ್ಮರ ಮುಂತಾದ ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.







