ಮಾನವ ಹಕ್ಕು ಸಂಸ್ಥೆಯಿಂದ ಆರೋಗ್ಯ ಮಾಹಿತಿ ಕಾರ್ಯಾಗಾರ…
ಬಂಟ್ವಾಳ ಜ.2: ರಾಷ್ಟ್ರೀಯ ಮಾನವ ಹಕ್ಕು ಮತ್ತು ಮಕ್ಕಳ ಹಾಗೂ ಮಹಿಳಾ ಉನ್ನತೀಕರಣ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯಲ್ಲಿ ಮಾಣಿ ಲಯನ್ಸ್ ಕ್ಲಬ್ ಸಹಕಾರದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಅಧ್ಯಕ್ಷ ಡಾ. ನಿರಂಜನ್ ಶೆಟ್ಟಿ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಶಾರೀರಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ನಮ್ಮ ಆಚಾರ, ಆಹಾರ, ವಿಚಾರಗಳನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಂಡಾಗ ಆರೋಗ್ಯವಂತರಾಗಬಹುದು ಎಂದು ತಿಳಿಸಿದರು.
ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಜನಾರ್ದನ ಪೆರಾಜೆ ಅಧ್ಯಕ್ಷತೆ ವಹಿಸಿ ತರಬೇತಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ , ಕಾರ್ಯದರ್ಶಿ ಮಹೇಶ್ ಶೆಟ್ಟಿ , ಮುಖ್ಯೋಪಾದ್ಯಾಯಿನಿ ಸುಪ್ರಿಯ ಉಪಸ್ಥಿತರಿದ್ದರು. ರಾಷ್ಟ್ರೀಯ ಮಾನವ ಹಕ್ಕು ಆಯೋಗದ ದ.ಕ. ಜಿಲ್ಲಾಧ್ಯಕ್ಷ ಸಚ್ಚಿದಾನಂದ ರೈ ಪಾಳ್ಯ, ಉಪಾಧ್ಯಕ್ಷ ಜಯಾನಂದ ಪೆರಾಜೆ ,ಪದಾಧಿಕಾರಿಗಳಾದ ರವೀಂದ್ರ ರೈ, ಮಂಜುಳಾ ಕುಶಲ, ನಿಶ್ವಿತ ಉಪಸ್ಥಿತರಿದ್ದರು.






