ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ರವರಿಗೆ ಸುಳ್ಯದಲ್ಲಿ ಸ್ವಾಗತ…
ಸುಳ್ಯ:ಮಂಗಳೂರು ವಿದ್ಯುತ್ ಸರಬರಾಜು ನಿಗಮ ( ನಿ ) ಮೆಸ್ಕಾಂ ಅಧ್ಯಕ್ಷ ರಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸಿದ ಹರೀಶ್ ಕುಮಾರ್ ರವರನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫ ಶಾಲು ಹಾಕಿ, ಪುಷ್ಪ ಗುಚ್ಚ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ, ಕೆಪಿಸಿಸಿ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಮಂಗಳೂರು ಮಾಜಿ ಮೇಯರ್ ಶಶಿಧರ ಹೆಗ್ಡೆ, ಗ್ಯಾರಂಟಿ ಯೋಜನೆ ಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್, ಕಾರ್ಯದರ್ಶಿ ಪಿ. ಎಸ್. ಗಂಗಾಧರ್, ಡಿಸಿಸಿ ಉಪಾಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮೊದಲಾದವರು ಉಪಸ್ಥಿತರಿದ್ದರು.


