ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಕಸಿತ ಭಾರತ ವಿಚಾರಗೋಷ್ಠಿ…
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಶ್ರಯದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನದ ಪರಿಕಲ್ಪನೆ ವಿಕಸಿತ ಭಾರತ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಈ ವಿಷಯದ ಬಗ್ಗೆ ವಿಚಾರಗೋಷ್ಠಿಯೊಂದನ್ನು ಏರ್ಪಡಿಸಲಾಗಿದೆ.
ಫೆಬ್ರವರಿ 7, 2026 ಶನಿವಾರ ಮಧ್ಯಾಹ್ನ 12 ಗಂಟೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ನವದೆಹಲಿ ಲೋಕಸಭಾ ಕ್ಷೇತ್ರದ ಸಂಸದೆ ಬಾನ್ಸುರಿ ಸ್ವರಾಜ್ ಈ ಕಾರ್ಯಕ್ರಮದಲ್ಲಿ ತಮ್ಮ ವಿಚಾರಧಾರೆಗಳನ್ನು ಹಂಚಿಕೊಳ್ಳಲಿದ್ದಾರೆ. ಇವರು ವೃತ್ತಿಯಲ್ಲಿ ಹೆಸರಾಂತ ವಕೀಲೆಯಾಗಿದ್ದು, ಕೇಂದ್ರ ಸರ್ಕಾರದ ಪೂರ್ವ ಮಂತ್ರಿಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ.
ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಮ್ಮ ಅಮೂಲ್ಯ ಕೊಡುಗೆಯನ್ನು ನೀಡುವಂತೆ ಅವರನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಈ ವಿಚಾರಗೋಷ್ಟಿಯನ್ನು ಏರ್ಪಡಿಸಲಾಗುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


