ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ರಾಗಿ ನೇಮಕಗೊಂಡ ದಿನೇಶ್ ಅಂಬೆಕಲ್ಲು ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ…

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೆಪಿಸಿಸಿ ಯಿಂದ ನೇಮಕಗೊಂಡ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಅಂಬೆಕಲ್ಲು ರವರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಬ್ಲಾಕ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಮಂಜುನಾಥ ಮಡ್ತಿಲ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಅಂಬೆಕಲ್ಲು ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸಿ ನಂತೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆಯವರು, ದ. ಕ. ಜಿಲ್ಲಾ (ಗ್ರಾಮಾoತರ) ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಅಲಿ ಯವರು ನನ್ನನ್ನು ನೇಮಿಸಿರುವುದು ಪಕ್ಷದ ಕೆಲಸ ಮಾಡಲು ಸಿಕ್ಕಿದ ಅವಕಾಶ ಎಂದು ಹೇಳಿದರಲ್ಲದೆ, ನೇಮಕ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

Related Articles

Back to top button