ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉದ್ಯೋಗ ಮೇಳ “ವಿವೇಕ ಉದ್ಯೋಗ” ಫೆ. 21 ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.
ಭಾರತ ಸರ್ಕಾರದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ಕೆ. ಎಸ್. ಆರ್. ಎಲ್. ಪಿ. ಎಸ್ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಗುಡಿ ಕೈಗಾರಿಕೆಗಳಿಗೆ ಮಾರುಕಟ್ಟೆ ಒದಗಿಸುತ್ತಿರುವ ಸರಸ್ ಮೇಳದಂತಹಾ ಮೇಳಗಳು ಗ್ರಾಮೀಣಾಭಿವೃದ್ಧಿಗೆ ಸಹಕಾರಿ. ಉದ್ಯೋಗದ ಸಂದರ್ಶನ ಎಂದರೆ ಅದು ಒಂದು ಕಲಿಕೆಯೇ ಆಗಿದೆ. ಒಮ್ಮೆ ಹಿನ್ನಡೆ ಆಯಿತು ಎಂದಾದರೆ ಬದುಕು ಅಲ್ಲಿಗೆ ಮುಗಿಯಿತು ಎಂದಲ್ಲ. ಕೌಶಲ್ಯ ಹಾಗೂ ಪ್ರತಿಭೆಗಳನ್ನು ನಾವು ಬೆಳೆಸಿಕೊಳ್ಳಬೇಕು. ಉದ್ಯೋಗ ಹಾಗೂ ಇನ್ನಿತರ ಅವಕಾಶಗಳ ಬಗ್ಗೆ ನಾವು ಜಾಗೃತರಾಗಬೇಕು. ಹಾಗೂ ಇತರರಿಗೆ ಆ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಉದ್ಯೋಗದ ಸಂದರ್ಶನದಲ್ಲಿ ಅನಗತ್ಯ ಭಯ ಬೇಡ. ಅನುಭವದ ಮೂಲಕ ಬದುಕನ್ನು ರೂಪಿಸಿಕೊಳ್ಳಬೇಕು. ಪಠ್ಯದ ಕಲಿಕೆಯೊಂದಿಗೆ ಪ್ರಾಯೋಗಿಕ ಜ್ಞಾನವೂ ಜೀವನದಲ್ಲಿ ಅತ್ಯಗತ್ಯವೆಂದು ಹೇಳಿದರು.
ಕನ್ನಡ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಾಹಿದ್ ತೆಕ್ಕಿಲ್ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಆಗಬೇಕೆಂದರೆ ವಿವಿಧ ಕಂಪೆನಿಗಳು ಹಳ್ಳಿಗಳತ್ತವೂ ಗಮನ ಹರಿಸಬೇಕು ಎಂದು ಹೇಳಿದರು. ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ದೇಶಪ್ರೇಮ ಅವಶ್ಯ. ನಮ್ಮ ಬೆಳವಣಿಗೆಯಲ್ಲಿ ನಮ್ಮ ದೇಶದ ಪಾತ್ರವಿರುವಾಗ ನಾವೂ ದೇಶಕ್ಕೆ ಏನಾದರೂ ಕೊಡುಗೆ ಸಲ್ಲಿಸಬೇಕು ಎಂದರು.
ವಿಧಾನ ಪರಿಷತ್ತಿನ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು ಎಂದರಲ್ಲದೆ ಉದ್ಯೋಗ ದೇಶದ ಅಭಿವೃದ್ಧಿಗೆ ಮೂಲ ಬುನಾದಿಯಾಗಿದೆ ಎಂದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಯುವಜನರು ಉದ್ಯೋಗ ಮೇಳಗಳಲ್ಲಿ ಭಾಗವಹಿಸಬೇಕು. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಉದ್ಯೋಗ ಅವಕಾಶಗಳು ಇದ್ದೇ ಇರುತ್ತವೆ. ಯುವಜನತೆ ನಕಾರಾತ್ಮಕ ಚಿಂತನೆ ಮಾಡದೇ ಧನಾತ್ಮಕ ಚಿಂತನೆಯೊಂದಿದೆ ಮುಂದುವರಿಯಬೇಕಾಗಿದೆ ಎಂದರು.
ಎನ್.ಆರ್.ಎಮ್.ಎಲ್ ನ ಉಪನಿರ್ದೇಶಕ ಜಗನ್ನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್, ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಉಪಸ್ಥಿತರಿದ್ದರು.

ಪುತ್ತೂರು ಮತ್ತು ಕಡಬ ತಾಲೂಕು ಪಂಚಾಯತ್ ಅಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ದಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಪ್ರಸ್ತಾವನೆಗೈದರು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ವಂದಿಸಿದರು. ವಿವೇಕಾನಂದ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ.ಎಸ್ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 125 ಕಂಪನಿಗಳು ಹಾಗೂ 2500 ಉದ್ಯೋಗಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

whatsapp image 2026 02 21 at 2.30.01 pm

639565481 18071296808427291 2054575437872008820 n

636957655 18442220998128518 29190530556388022 n

639917858 18071296871427291 7605139950701510316 n

Related Articles

Back to top button