ಮಾ.13- ತೆಕ್ಕಿಲ್ ಪ್ರತಿಷ್ಟಾನ ವತಿಯಿಂದ 21ನೇ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟ…

ಸುಳ್ಯ: ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ನಡೆಸಿಕೊಂಡು ಬರುವ ಇಪ್ಪತ್ತೊಂದನೆ “ಸರ್ವ ಧರ್ಮ ಸೌಹಾರ್ದ ಇಫ್ತಾರ್ “ಕೂಟ ಮಾ. 13 ರಂದು ಸಂಜೆ 5 ಗಂಟೆಯಿಂದ ಅರಂತೋಡು ತೆಕ್ಕಿಲ್ ಸಮುದಾಯಭವನದಲ್ಲಿ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಳೆದ ಇಪ್ಪತ್ತೊಂದು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ ಸಂಸ್ಥೆ ಕೋವಿಡ್ ಮಹಾಮಾರಿ ಸಂದರ್ಭದಲ್ಲೂ ಸೌಹಾರ್ದ ಇಫ್ತಾರ್ ಕೂಟ ನಡೆಸಿದ್ದು ಕಾರ್ಯಕ್ರಮದಲ್ಲಿ ಸಾಮಾಜಿಕ ಧಾರ್ಮಿಕ ರಾಜಕೀಯ ಸಂಘ ಸಂಸ್ಥೆಗಳ ಪ್ರಮುಖರು ಮತ್ತಿತರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಅಶ್ರಫ್ ಗುಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

whatsapp image 2026 03 08 at 11.41.36 am

Related Articles

Back to top button