ಡಾ. ಮಾಲತಿ ಶೆಟ್ಟಿ ಮಾಣೂರು ಅವರಿಗೆ ವಿಶ್ವ ಮಹಿಳಾ ದಿನಾಚರಣೆಯ ಸಲುವಾಗಿ ಸನ್ಮಾನ…

ಮಂಗಳೂರು:ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಹಾಗೂ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ (ರಿ) ಮಂಗಳೂರು ಜಂಟಿ ಆಶ್ರಯದಲ್ಲಿ ಸಂಘದ ಕಡೆಮೊಗರು ಸಭಾಂಗಣದಲ್ಲಿ ಮಾ. 8ರಂದು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಹಿತಿ, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರನ್ನು ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ.ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ದಿನಕರ್ ಕುಲಾಲ್ ವಹಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬಿತ್ . ಕಾರ್ಮಿಕ ಅಧಿಕಾರಿ ಕುಮಾರ್ ಬಿ. ಎಲ್.ದ.ಕ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ಚಾರ್ಮೇನ್ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ರಿಜಿಸ್ಟರ್ ಮಂಗಳೂರು ಅಧ್ಯಕ್ಷರಾದ ಎ. ಜನಾರ್ಧನ್ , ಪದಾಧಿಕಾರಿಗಳಾದ ಪುಂಡಲೀಕ ಸುವರ್ಣ, ದಿವಾಕರ್ ಎಂ ,ಅಬ್ದುಲ್ ಮೊಯಿದ್ದೀನ್ ಕಾರ್ಕಳ ,ಕೆ ವಿ . ರಾಜಗೋಪಾಲ್, ಕಿರಣ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಧವರವರು ಕಾರ್ಯಕ್ರಮ ನಿರೂಪಿಸಿದರು.ರಾಜಗೋಪಾಲ್ ಸ್ವಾಗತಿಸಿದರು. ಕಿರಣ್ ರಾಜ್ ವಂದಿಸಿದರು.

Related Articles

Back to top button