ಸುಳ್ಯ ಬಿ ಇ ಒ ರವರ ಕೃತಿ ಗೆ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ- ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ವತಿಯಿಂದ ಗೌರವಾರ್ಪಣೆ…
ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ, ಸಾಹಿತಿ ವೈ. ಎಸ್. ಹರಗಿಯವರ ಸಾಹಿತ್ಯ ಕೃತಿ ‘”ಇಮಾಮ್ ಸಾಹೇಬರ ಕುದುರೆ ” ಕೃತಿಗೆ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ದೊರೆತಿದ್ದು ಅವರನ್ನು ಸುಳ್ಯ ಗ್ರೀನ್ ವ್ಯೂ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲಾ ಸಂಚಾಲಕ, ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿ ಇ ಒ ಕಚೇರಿಯ ಶ್ರೀಮತಿ ಧನ ಲಕ್ಷ್ಮಿ, ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಣ, ಸುಳ್ಯ ತಾಲೂಕು ಆಸ್ಪತ್ರೆ ಯ ವೈದ್ಯರುಗಳಾದ ಡಾ ನಿಶ್ಚಿತ, ಡಾ ರೋಹಿತ್ ಮೊದಲಾದವರು ಉಪಸ್ಥಿತರಿದ್ದರು.





