ಎಸ್‌ಎಸ್‌ಎಲ್‌ಸಿ ಫಲಿತಾಂಶ : ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕಕ್ಕೆ ಸತತ 7ನೇ ಬಾರಿ ಶೇ.100℅ ಫಲಿತಾಂಶ…
ಸುಳ್ಯ : 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಪ್ರಕಟಗೊಂಡಿದ್ದು, ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸತತ ಏಳನೇ ಬಾರಿ ಶೇ.100℅ ಫಲಿತಾಂಶ ಲಭಿಸಿದೆ.
9 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 09 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 4 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ ಒಂದು ವಿದ್ಯಾರ್ಥಿಯು ತೃತೀಯ ದರ್ಜೆಯಲ್ಲಿ
ಉತ್ತೀರ್ಣರಾಗಿದ್ದಾರೆ. ಅಲ್ಲದೆ ಮೊಹಮ್ಮದ್ ಮಜಮ್ಮಿಲ್ 520 ಅಂಕಗಳೊಂದಿಗೆ (83.2) ಶಾಲೆಯಲ್ಲಿ ಅತೀ ಹೆಚ್ಚು ಮಾರ್ಕಿನೊಂದಿಗೆ ಉತ್ತೀರ್ಣರಾಗಿದ್ದಾರೆ. ಕಳೆದ ಇಪ್ಪತ್ತು ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡಿರುವ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವಿವಿಧ ಹುದ್ದೆಯಲ್ಲಿ ಸೇವೆಸಲ್ಲಿಸಿದ್ದು ಶೇಕಡ ನೂರು ಪಲಿತಾಂಶ ಬರಲು ಕಾರಣ ಕರ್ತರಾದ ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಸಂಪತ್ ಅವರನ್ನು ಅಧ್ಯಾಪಕ ವೃಂದದವರನ್ನು, ಪೋಷಕರನ್ನು ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಮತ್ತು ಸಂಸ್ಥೆಯ aadalitaadhikari ಎ ಅಬ್ದುಲ್ಲಾ ಅವರು ಅಭಿನಂದಿಸಿದ್ದಾರೆ.





