ಹಿರಿಯ ಸಾಹಿತಿ ಡಾ. ನಾ.ಮೊಗಸಾಲೆ ಅವರಿಗೆ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ 2019 ….
ಬಂಟ್ವಾಳ :ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕನ್ನಡ ಕಲ್ಹಣ ದಿ.ನೀರ್ಪಾಜೆ ಭೀಮ ಭಟ್ಟರ ಹೆಸರಿನಲ್ಲಿ ಪ್ರತಿ ವರ್ಷ ನೀಡಲಾಗುವ 2019ನೇ ಸಾಲಿನ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿಯನ್ನು ಖ್ಯಾತ ಸಾಹಿತಿ ಡಾ. ನಾ.ಮೊಗಸಾಲೆಯವರಿಗೆ ಪ್ರದಾನ ಮಾಡಲಾಗುವುದೆಂದು ನೀರ್ಪಾಜೆ ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ಪ್ರಕಟಿಸಿದ್ದಾರೆ.
ಬಿ.ಸಿ.ರೋಡಿನ ಸ್ಪರ್ಶ ಕಲಾ ಕೇಂದ್ರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ಹಿರಿಯ ಸಾಹಿತಿ ಡಾ. ನಾ.ಮೊಗಸಾಲೆಯವರ ಹೆಸರನ್ನು ಅಂತಿಮಗೊಳಿಸಲಾಯಿತು. ದ.21 ರಂದು ಗಣ್ಯ ಅತಿಥಿಗಳ ಉಪಸ್ಥಿತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸುವುದೆಂದು ತೀರ್ಮಾನಿಸಲಾಯಿತು.
ಸಭೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಮೋಹನ್ ರಾವ್ , ನಿಟಕಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ಎಸ್.ಗಂಗಾಧರ ಭಟ್ ಕೊಳಕೆ, ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ್ ,ಕಲಾವಿದ ಮಂಜು ವಿಟ್ಲ, ಚುಟುಕು ಸಾಹಿತ್ಯ ಪರಿಷತ್ತ್ ಬಂಟ್ವಾಳ ತಾಲೂಕು ಅಧ್ಯಕ್ಷ ರಾಜಾರಾಮ ವರ್ಮ ವಿಟ್ಲ , ಸಿದ್ದಕಟ್ಟೆ ಸರಕಾರಿಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಉಪಪ್ರಾಂಶುಪಾಲ ರಮಾನಂದ ಎಸ್., ಉಪನ್ಯಾಸಕ ಡಿ.ಬಿ.ಅಬ್ದುಲ್ ರಹಿಮಾನ್ ತುಂಬೆ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕಿ ಶಾರದಾ ಎಸ್.ರಾವ್, ನಿವೃತ್ತ ಬ್ಯಾಂಕ್ ಮೆನೇಜರ್ ಬೇಬಿ ಕುಂದರ್, ಸಾಮಾಜಿಕ ಕಾರ್ಯಕರ್ತ ವಸಂತ ಶೆಟ್ಟಿ , ಪತ್ರಕರ್ತ ಅಬ್ದುಲ್ ಲತೀಫ್ ಮೊದಲಾದವರು ಉಪಸ್ಥಿತರಿದ್ದರು.