ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು – ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಡಾ.ದೀಪಕ್.ಕೆ.ಬಿ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿ ಡಾ.ದೀಪಕ್.ಕೆ.ಬಿ ಪದ ಸ್ವೀಕಾರ ಮಾಡಿದ್ದಾರೆ.
ಇಪ್ಪತ್ತು ವರ್ಷಗಳ ಅಧ್ಯಾಪನದ ಅನುಭವವನ್ನು ಹೊಂದಿರುವ ಇವರು ಕಳೆದ 19 ವರ್ಷಗಳಿಂದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆಯನ್ನು ಹೊಂದಿರುವ ಇವರು ಉತ್ಪಾದನಾ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದಾರೆ. 06 ಅಂತಾರಾಷ್ಟ್ರೀಯ ಸಮ್ಮೇಳನ ಗಳಲ್ಲಿ ಇವರು ಭಾಗವಹಿಸಿದ್ದು, 10 ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಇವರ ಪ್ರೌಢ ಪ್ರಬಂಧಗಳು ಮುದ್ರಣಗೊಂಡಿವೆ.
ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದಸ್ವೀಕಾರ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಹಾರೈಸಿದರು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.





