ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ-ಟಿ.ಎಂ. ಶಾಹಿದ್ ತೆಕ್ಕಿಲ್ ಭಾಗಿ…

ಬೆಂಗಳೂರು :ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರಯುಕ್ತ ಬೆಂಗಳೂರಿನ ಶ್ರೀ ಕಂಠೀರವ ಹೋರಾಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವ ಶ್ರೀ ಟಿ.ಎಂ. ಶಾಹಿದ್ ತೆಕ್ಕಿಲ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಜೊತೆ ಸೇರಿ ಮಕ್ಕಳನ್ನು ಕಾರ್ಮಿಕರನ್ನಾಗಿ ದುಡಿಸಿಕೊಳ್ಳದೆ ಒಳ್ಳೆಯ ಶಿಕ್ಷಣವನ್ನು ನೀಡಿ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯವಾಗಿ ದೈಹಿಕವಾಗಿ ಸದೃಢವಾಗಿರಬೇಕು. ಅಲ್ಲದೆ ದೇಶದ ಸತ್ಪ್ರಜೆಗಳನ್ನಾಗಿ ಪ್ರೆರೇಪಿಸಲು ನಾವೆಲ್ಲರೂ ಕೈ ಜೋಡಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಅಂತರ ರಾಷ್ಟೀಯ ಕಾರ್ಮಿಕ ಸಂಸ್ಥೆ ನವ ದೆಹಲಿಯ ನಿರ್ದೇಶಕರಾದ ಶ್ರೀಮತಿ ಮಿಚಿಕೋ ಮಿಯಾಮೊಟೂರವರು, ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ.ಕೆ. ಫಾಹಿಮ್ ರವರು, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ||ಹೆಚ್.ಎನ್. ಗೋಪಾಲ ಕೃಷ್ಣ ರವರು, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಿಇಓ ಶ್ರೀ ಯತೀಶ್ ಆರ್ ರವರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಶ್ರೀ ಕಾಂತರಾಜು ಪಿ.ಎಸ್ ರವರು ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರವಿ. ಡಿ.ಚನ್ನಣ್ಣನವರ ಮತ್ತಿತರರು ಉಪಸ್ಥಿತರಿದ್ದರು.

Whatsapp Image 2026 06 12 At 5.16.25 Pm 200x300

Whatsapp Image 2026 06 12 At 5.16.37 Pm 300x225

Related Articles