ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು -ಕ್ರೀಡಾ ಸಾಧನೆಗಾಗಿ ನಗದು ಪುರಸ್ಕಾರ…

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಕ್ಕಾಗಿ 125000 ರೂಗಳ ನಗದು ಪುರಸ್ಕಾರವನ್ನು ಗಳಿಸಿಕೊಂಡಿದೆ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಲಯ, ಅಂತರ್ವಲಯ, ವಿಶ್ವವಿದ್ಯಾನಿಲಯ ಮತ್ತು ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಕಾಲೇಜಿನ ಈ ಸಾಧನೆಗಾಗಿ ವಿಶ್ವವಿದ್ಯಾನಿಲಯದ ಕ್ರೀಡಾಭಿವೃದ್ದಿ ಯೋಜನೆಯಲ್ಲಿ ಈ ಪುರಸ್ಕಾರವನ್ನು ನೀಡಲಾಗಿದೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಸಾಧಕರ ದಿನಾಚರಣೆಯಲ್ಲಿ ಉಪಕುಲಪತಿಗಳಾದ ಸನ್ಮಾನ್ಯ ಡಾ.ವಿದ್ಯಾಶಂಕರ್.ಎಸ್ ಮತ್ತು ಇತರ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಕಾಲೇಜಿನ ಪರವಾಗಿ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಡಾ.ಶ್ರೀಕಾಂತ್ ರಾವ್.ಎಸ್.ಕೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ.ಬಾಲಚಂದ್ರ ಗೌಡ ಅವರು ಸಮಾರಂಭದಲ್ಲಿ ಪಾಲ್ಗೊಂಡರು.
ಈ ಸಾಧನೆಗೆ ಶ್ರಮವಹಿಸಿದ ಎಲ್ಲರನ್ನೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.

Related Articles