ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ  ಟಿ.ಎಂ. ಶಹೀದ್ ತೆಕ್ಕಿಲ್…

ಬೆಳ್ತಂಗಡಿ : ರಾಜ್ಯಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, (ಸಚಿವ ದರ್ಜೆ) ಕನಿಷ್ಠ ವೇತನ ಸಲಹಾ ಮಂಡಳಿ, ಕರ್ನಾಟಕ ಸರ್ಕಾರ ಇದರ ಅಧ್ಯಕ್ಷರಾದ ಟಿ.ಎಂ. ಶಹೀದ್ ತೆಕ್ಕಿಲ್ ಅವರು ಧರ್ಮಸ್ಥಳದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸೌಜನ್ಯಯುತ ಭೇಟಿಯ ಸಂದರ್ಭದಲ್ಲಿ, ಟಿ.ಎಂ. ಶಹೀದ್ ತೆಕ್ಕಿಲ್ ಅವರು ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಗಣ್ಯರು ವಿವಿಧ ಸಾಮಾಜಿಕ ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಕ್ಷೇತ್ರದ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related Articles