ಉತ್ತಮ ಜನಪ್ರತಿನಿಧಿಗಳು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ವಿದ್ಯಾರ್ಥಿ ಸಂಸತ್ತು ಸಹಕಾರಿಯಾಗುತ್ತದೆ- ಶಾಸಕಿ ಭಾಗೀರಥಿ ಮುರುಳ್ಯ…

ಸುಳ್ಯ , ಜೂನ್ 29: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ.
ವಿದ್ಯಾರ್ಥಿ ಸಂಸತ್ತಿನ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಪ್ರತಿನಿಧಿಗಳು ತಮ್ಮ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಆಡಳಿತದ ಅನುಭವ, ಚರ್ಚಾ ಕೌಶಲ್ಯ ಹಾಗೂ ಸಾರ್ವಜನಿಕ ಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬಹುದು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಇಂತಹ ಅನುಭವಗಳು ಭವಿಷ್ಯದಲ್ಲಿ ಉತ್ತಮ ಜನಪ್ರತಿನಿಧಿಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಅಬ್ದುಲ್ ಎ. ವಹಿಸಿದ್ದರು. ಪ್ರೌಢಶಾಲಾ ಮುಖ್ಯಗುರು ಸೋಮಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ವಿದ್ಯಾರ್ಥಿ ಸರ್ಕಾರದ ಮಂತ್ರಿಗಳು ಹಾಗೂ ವಿದ್ಯಾರ್ಥಿ ಸಂಸತ್ತಿನ ಪ್ರತಿನಿಧಿಗಳಿಗೆ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್. ಪ್ರಮಾಣ ವಚನ ಬೋಧಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕರಾದ ಗುರುರಾಜ್, ಲೇಖನ್ ಪ್ರಿಯ,ಶುಶಾಂಕ್ ಕೆ.ಜೆ ಮತ್ತು ತೇಜಸ್ ಗೌಡ ಪಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ವಂದೇ ಮಾತರಂ ಮತ್ತು ನಾಡಗೀತೆಯೊಂದಿಗೆ ಆರಂಭಗೊಂಡಿತು. ಚುನಾವಣಾಧಿಕಾರಿ ಪದ್ಮಕುಮಾರ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುರೇಶ್ ವಾಗ್ಲೆ ವಂದನಾರ್ಪಣೆ ಸಲ್ಲಿಸಿದರು. ಉಪನ್ಯಾಸಕ ಮೋಹನ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.

whatsapp image 2026 06 30 at 2.43.37 pm (1)

whatsapp image 2026 06 30 at 2.43.37 pm

Related Articles