ಮಾಣಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕರಾಯ ಕೊರಗಪ್ಪ ಸಂಸ್ಮರಣೆ….

ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಕೀರ್ತಿಶೇಷ ಕರಾಯ ಕೊರಗಪ್ಪ ಸಂಸ್ಮರಣೆ ಹಾಗೂ ಲಯನ್ಸ್ ಯಕ್ಷ ಸಂಭ್ರಮ ಕಾರ್ಯಕ್ರಮವು ದ.14 ರಂದು ಮಾಣಿ ದ.ಕ.ಜಿ.ಪ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.
ಲಯನ್ಸ್ ಕ್ಲಬ್ ಮಾಣಿ ಮತ್ತು ಲಯನ್ಸ್ ಕ್ಲಬ್ ಬಂಟ್ವಾಳ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಲಯನ್ಸ್ ಜಿಲ್ಲಾ ಉಪ ಗವರ್ನರ್ ವಸಂತ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲಯನ್ಸ್ ಯಕ್ಷಗಾನ ಉಪಾಧ್ಯಕ್ಷ ಬಿ.ಸಂಜೀವ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಪರಾಹ್ನ 3.30 ರಿಂದ “ಅತಿಕಾಯ ಮೋಕ್ಷ” ಯಕ್ಷಗಾನ ತಾಳಮದ್ದಳೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ನಡೆಯಲಿದೆ ಎಂದು ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button