ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಶ್ರೀ ಸುಧಾಕರ ರೆಡ್ಡಿ ಅವರು ಪೊಳಲಿ ದೇವಸ್ಥಾನಕ್ಕೆ ಭೇಟಿ…

ಬಂಟ್ವಾಳ : ಬಿಜೆಪಿ ಕರ್ನಾಟಕ ರಾಜ್ಯ ಸಹ ಉಸ್ತುವಾರಿ ಶ್ರೀ ಸುಧಾಕರ ರೆಡ್ಡಿ ಅವರು ಇಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉಪಸ್ಥಿತರಿದ್ದು, ದೇವಸ್ಥಾನದ ಧಾರ್ಮಿಕ ಪರಂಪರೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಭಕ್ತಾದಿಗಳಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರಾಜ್ಯದ ಸುಭಿಕ್ಷತೆ, ಜನರ ನೆಮ್ಮದಿ ಹಾಗೂ ದೇಶದ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಮಂಜುಳಾ ರಾವ್, ವೆಂಕಟೇಶ್ ನಾವಡ,ಪೊಳಲಿ ಗಿರಿಪ್ರಕಾಶ್ ತಂತ್ರಿ, ಲೋಕೇಶ್ ಭರಣಿ, ಯಶವಂತ ಪೊಳಲಿ, ಕಾರ್ತಿಕ್ ಬಳ್ಳಾಲ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.






