₹1010 ಕೋಟಿ ವೆಚ್ಚದಲ್ಲಿ 10,000 ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ: ಸರ್ಕಾರದ ಯೋಜನೆಗೆ ಟಿ.ಎಂ. ಶಾಹೀದ್ ತೆಕ್ಕಿಲ್ ಶ್ಲಾಘನೆ; ರಾಜ್ಯ ಯುವಜನ ಆಯೋಗ ಸ್ಥಾಪನೆಗೆ ಆಗ್ರಹ…

ಬೆಂಗಳೂರು: ರಾಜ್ಯದ ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರವು 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಆದೇಶ ಹೊರಡಿಸಿದೆ. ಒಟ್ಟು ₹1,010 ಕೋಟಿ ಭಾರಿ ಮೊತ್ತದ ಈ ಯೋಜನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ಮುಕ್ತಕಂಠದಿಂದ ಶ್ಲಾಘಿಸಿ, ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ‘ಯುವಜನ ಆಯೋಗ’ ಸ್ಥಾಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ದೇಶದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಮೂಡಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಮ್ಮಿಕೊಂಡಿದ್ದ ಐತಿಹಾಸಿಕ ‘ಭಾರತ್ ಜೋಡೋ’ ಪಾದಯಾತ್ರೆಯ ಆಶಯ ಹಾಗೂ ಸೋದರತ್ವದ ಭಾವನೆಯನ್ನು ತಳಮಟ್ಟದಲ್ಲಿ ಸಾರುವ ನಿಟ್ಟಿನಲ್ಲಿ ಈ ಯೋಜನೆಯನ್ನು ರೂಪಿಸಲಾಗಿದೆ.

ಡಿಕೆಶಿ ನಾಯಕತ್ವದಲ್ಲಿ ಯುವ ಸಬಲೀಕರಣ: ಮಾನ್ಯ ಮುಖ್ಯಮಂತ್ರಿ ಅವರ ವಿಶೇಷ ಕಾಳಜಿಯೊಂದಿಗೆ, ಯುವ ಜನತೆಗೆ ಹೊಸ ನಾಯಕತ್ವದ ಅವಕಾಶಗಳನ್ನು ಸೃಷ್ಟಿಸಲು ಮತ್ತು ಅವರನ್ನು ಸಾಮಾಜಿಕವಾಗಿ ಬಲಿಷ್ಠಗೊಳಿಸಲು ಈ ಯೋಜನೆಗೆ ಮರುಜೀವ ನೀಡಲಾಗಿದೆ. ವಿವಿಧ ಜಾತಿ, ಧರ್ಮ ಮತ್ತು ಭಾಷೆಯ ಯುವಜನರನ್ನು ಒಂದುಗೂಡಿಸಿ, ಕೋಮು ಸೌಹಾರ್ದತೆ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಕಾಪಾಡುವುದು ಮತ್ತು ಸಂವಿಧಾನದ ಮೌಲ್ಯಗಳನ್ನು ಯುವ ಮನಸ್ಸುಗಳಲ್ಲಿ ಬಿತ್ತುವುದು ಈ ಸಂಘಗಳ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಭಾಗದ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್‌ಗಳಲ್ಲಿ ಸ್ಥಾಪನೆಯಾಗುವ ಪ್ರತಿ ಸಂಘಕ್ಕೆ ವಾರ್ಷಿಕ ತಲಾ ₹10 ಲಕ್ಷ ಬಂಡವಾಳ ಮತ್ತು ಕಾರ್ಯಕಾರಿ ಅನುದಾನ ಸಿಗಲಿದೆ.
ಈ ಕುರಿತು ತಿಳಿಸಿದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು, “ರಾಹುಲ್ ಗಾಂಧೀಜಿಯವರ ಭಾರತ್ ಜೋಡೋ ಪರಿಕಲ್ಪನೆ ಹಾಗೂ ಡಿ.ಕೆ. ಶಿವಕುಮಾರ್ ಅವರ ಯುವ ಸಬಲೀಕರಣದ ದೃಷ್ಟಿಕೋನಕ್ಕೆ ಪೂರಕವಾಗಿರುವ ಈ ಯೋಜನೆ ಐತಿಹಾಸಿಕ ರಾಷ್ಟ್ರ ನಿರ್ಮಾಣದ ಕೆಲಸವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಯುವಕರ ಸಮಸ್ಯೆಗಳಿಗೆ ಸ್ಪಂದಿಸಲು ಅಮಲು ಪದಾರ್ಥ ವಿರೋಧಿ ಯೋಜನೆ ನಿರುದ್ಯೋಗ ಸಮಸ್ಯೆ ನಿವಾರಣೆ ಕೋಮು ಸೌಹಾರ್ದತೆ ಸಹಕಾರ ಮನೋಭಾವ ಯುವಜನರ ಸಭಾಲೀಕರಣಕ್ಕೆ ಪ್ರತ್ಯೇಕ ‘ಯುವಜನ ಆಯೋಗ’ವನ್ನು ತಕ್ಷಣವೇ ಸ್ಥಾಪಿಸಬೇಕು,” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಟಿ ಎಂ ಶಾಹಿದ್ ತೆಕ್ಕಿಲ್ ಒತ್ತಾಯಿಸಿದರು.

whatsapp image 2026 07 14 at 1.56.27 pm

Related Articles