ಕನ್ನಡ ಸಾಹಿತ್ಯ ಸಂಘಟಕ,ಹಿರಿಯ ಪತ್ರಕರ್ತ ,ಶಿಕ್ಷಕ ಜಯಾನಂದ ಪೆರಾಜೆಗೆ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ…

ಬಂಟ್ವಾಳ,ಜು.೨೧: ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕ, ಬರಹಗಾರರ ಸಂಘ,ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ ವೇದಿಕೆಗಳ ಅಧ್ಯಕ್ಷರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತ, ಸಾಹಿತಿ ಜಯಾನಂದ ಪೆರಾಜೆಯವರನ್ನು 2026ನೇ ಸಾಲಿನ ಸಾಲಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‌ಅವರು ಕನ್ನಡ ಭಾಷಾ ಶಿಕ್ಷಕರಾಗಿ,ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿದ್ದು ಲೇಖನಗಳ ಮೂಲಕ ಪರಿಚಿತರಾಗಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಯಲ್ಲಿ ಕವಿಯಾಗಿ ಭಾಗವಹಿಸಿ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ,ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ,ಸಂಪನ್ಮೂಲ ವ್ಯಕ್ತಿಯಾಗಿ ಸಾವಿರಾರು ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಜೇಸಿಐ,ಎಸ್.ಸಿ.ಐ. ಲಯನ್ಸ್ ಕ್ಲಬ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರೀಯ ಹಾಗೂ ಸಾಮಾಜಿಕ ಕಾರ್ಯದಲ್ಲಿ ಅವಿರತ ತೊಡಗಿಸಿಕೊಂಡಿರುವ ಪೆರಾಜೆಯವರ ಬಹುಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

whatsapp image 2026 07 21 at 4.55.24 pm

Related Articles