ವಿದ್ಯಾರ್ಥಿಯ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಯೇ ಶಿಕ್ಷಣದ ಗುರಿ : ಶಾಸಕ ರಾಜೇಶ್ ನಾಯ್ಕ್…
ಬಂಟ್ವಾಳ : ಪಠ್ಯ, ಸಹಪಠ್ಯ, ಕೀಡೆ, ಪ್ರಯೋಗ ಇತ್ಯಾದಿ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಯು ತನ್ನ ಸಮಗ್ರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ಶಕ್ಷಣದ ಗುರಿಯಾಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿಪ್ರಾಯ ಪಟ್ಟರು. ಅವರು ಬಿಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉಪನ್ಯಾಸ ನೀಡಿದ ಪದವಿಪೂರ್ವ ಕಾಲೇಜು ನೌಕರರ ಸಹಕಾರಿ ಸಂಘ, ಮಂಗಳೂರು ಇದರ ಅಧ್ಯಕ್ಷ ಕೆ.ಕೆ. ಉಪಾಧ್ಯಾಯ ಮಾತನಾಡಿ ವಿದ್ಯಾರ್ಥಿಗಳ ದಿನನಿತ್ಯದ ಆಗುಹೋಗುಗಳ ಬಗ್ಗೆ ಹೆತ್ತವರು ಅವಲೋಕನ ನಡೆಸಿ ಕಾಲಕಾಲಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದೆ ಎಂದು ಹೇಳಿದರು. ಸ್ಥಳೀಯ ಪುರಸಭಾ ಸದಸ್ಯೆ ಝೀನತ್ ಫಿರೋಝ್ ಅತಿಥಿಯಾಗಿ ಭಾಗವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ರಜನಿ ಚಿಕ್ಕಯ್ಯಮಠ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಅಭಿವೃದ್ಧಿ ಸಮಿತಿ ಸದಸ್ಯರಾದ ದಿನೇಶ್ ಅಮ್ಟೂರು, ಲ| ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಡಾ. ಶ್ಯಾಮ್ ಭಟ್, ಮಲ್ಲೇಶಪ್ಪ, ಸುಷ್ಮಾ ಚರಣ್, ಯಶೋಧ, ನೇತ್ರಾವತಿ ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಸುಮಾರು 10 ವರ್ಷಗಳಿಂದ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಕನ್ನಡ ಭಾಷಾ ಉಪನ್ಯಾಸಕಿ ಯಶೋಧ.ಕೆ ಇವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಯೂಸುಫ್ ಸ್ವಾಗತಿಸಿದರು. ಉಪನ್ಯಾಸಕ ದಾಮೋದರ್ ಇ ವರದಿ ವಾಚಿಸಿದರು. ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ್ ಕೆ ಹಾಗೂ ಆಶಾಲತಾ ಬಹುಮಾನ ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಉಪನ್ಯಾಸಕಿ ಯಶೋಧ.ಕೆ ಧನ್ಯವಾದ ನೀಡಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ಸಂಯೋಜಿಸಿದರು.