ನೀರ್ಪಾಜೆ ಪ್ರಶಸ್ತಿ ಪ್ರದಾನ – ಆಮಂತ್ರಣ ಪತ್ರಿಕೆ ಬಿಡುಗಡೆ….
ಬಂಟ್ವಾಳ:ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಇವರ ಆಶ್ರಯದಲ್ಲಿ ನಡೆಯಲಿರುವ ಕನ್ನಡದ ಕಲ್ಲಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಶುಕ್ರವಾರ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬಾ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪ್ರಶಸ್ತಿ ಪ್ರದಾನ ಸಮಾರಂಭವು ದ.21ರಂದು ಅಪರಾಹ್ನ 3.30ಕ್ಕೆ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಮಾಜಿ ಸಚಿವ ಬಿ.ರಮಾನಾಥ ರೈ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವರು.ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಗಿರೀಶ್ ಭಟ್ ಅಜಕ್ಕಳ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಕನ್ನಡ ಉಪನ್ಯಾಸಕಿ ಗೀತಾ ಕೋಂಕೋಡಿ ಅಭಿನಂದನಾ ಭಾಷಣ ಮಾಡಲಿದ್ದು, ತಾ.ಪಂ. ಉಪಾಧ್ಯಕ್ಷ ಬಿ.ಎಮ್.ಅಬ್ಬಾಸ್ ಆಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಮ್.ಪಿ. ಅತಿಥಿಗಳಾಗಿರುವರು.
ಅಭಿಮಾನಿ ಬಳಗದ ಅಧ್ಯಕ್ಷ ಸುದರ್ಶನ್ ಜೈನ್, ಕೋಶಾಧಿಕಾರಿ ಎಸ್.ಗಂಗಾಧರ ಭಟ್ ಕೊಳಕೆ, ಕ.ಸಾ.ಪ.ಅಧ್ಯಕ್ಷ ಕೆ.ಮೋಹನ ರಾವ್, ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ, ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪ್ರಭಾಕರ ಶೆಟ್ಟಿ ಕಾಂತಾಡಿಗುತ್ತು ಎಮ್.ಎಸ್.ಗೋಪಾಲಕೃಷ್ಣ ಆಚಾರ್ಯ, ಮೋಹನದಾಸ ಪೂಜಾರಿ, ಅಣ್ಣು ನಾಯ್ಕ, ರಮಾ ಎಸ್.ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೇ.ಮೂ.ಮಹೇಶ ಭಟ್ಟ ಪ್ರಾರ್ಥನೆ ನೆರವೇರಿಸಿದರು.