ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ…

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.
ಸರಿಯಾಗಿ ಎರಡು ವರ್ಷಗಳ ಹಿಂದೆ 2019ರ ಜುಲೈ 26ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಅಧಿಕಾರಕ್ಕೆ ಏರಿದ್ದರು.





