ಜ.4 ರಂದು ನೀರ್ಪಾಜೆ ಪ್ರಶಸ್ತಿ ಪ್ರದಾನ…..
ಬಂಟ್ವಾಳ: ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಇದರ ವತಿಯಿಂದ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ ಪ್ರದಾನ ಸಮಾರಂಭವು ಜ.4 ರಂದು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅಪರಾಹ್ನ 3.30ಕ್ಕೆ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ ದೀಪ ಪ್ರಜ್ವಲನೆ ಮಾಡಲಿದ್ದು ಕುವೆಂಪು ಭಾಷಾ ಪ್ರಾಧಿಕಾರ ಅಧ್ಯಕ್ಷ ಗಿರೀಶ್ ಭಟ್ ಅಜಕ್ಕಳ ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ. ಉಪನ್ಯಾಸಕಿ ಗೀತಾ ಕೊಂಕೋಡಿ ಪ್ರಶಸ್ತಿ ಪುರಸ್ಕೃತ ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಿವರಂಜನಿ ಕಲಾ ಕೇಂದ್ರ ಪೊಳಲಿ ಇವರಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.