ಪಂಜಿಕಲ್ಲು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ…..
ಬಂಟ್ವಾಳ: ಪಂಜಿಕಲ್ಲು ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ ಪಂಜಿಕಲ್ಲುಪದವಿನಲ್ಲಿ ನಡೆಯಿತು.
ಮಾಜಿ ಉಪಾಧ್ಯಕ್ಷ, ಪಂಚಾಯತ್ ಸದಸ್ಯ ಸಂಜೀವ ಪೂಜಾರಿ ಪಿಲಿಂಗಾಲು ಪ್ರಸ್ತಾವನೆಗೈದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಯವರು ಪಂಜಿಕಲ್ಲು ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳಿಗೆ ಶಾಸಕನಾಗಿ ಬಂದೂವರೆ ವರ್ಷದಲ್ಲಿ ಗರಿಷ್ಠ ಪ್ರಮಾಣದ ಅನುದಾನವನ್ನು ಒದಗಿಸಿದ್ದು ಇನ್ನು ಮುಂದೆಯು ಕೂಡ ಈ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಿ ಜನತೆಯ ಅಶೋತ್ತರಗಳನ್ನು ಈಡೇರಿಸುವುದಾಗಿ ಹೇಳಿದರು.
ಬಿಜೆಪಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ ಮಾತನಾಡಿ ಪಂಜಿಕಲ್ಲಿನ ಬಿಜೆಪಿ ಕಾರ್ಯಕರ್ತರು ಅನೇಕ ಬಾರಿ ದಬ್ಬಾಳಿಕೆ ರಾಜಕಾರಣಕ್ಕೆ ಸೆಡ್ಡು ಹೊಡೆದು ಈ ಭಾಗದಲ್ಲಿ ಪಕ್ಷವನ್ನು ಸಂಘಟಿಸಿ ಪಂಚಾಯತ್ ಅಧಿಕಾರ ಹಿಡಿಯುವ ಮೂಲಕ ಕಾಂಗ್ರೇಸ್‍ನ ಅನ್ಯಾಯಕ್ಕೆ ಉತ್ತರ ನೀಡಿದ್ದು ಇದೇ ರೀತಿ ಒಗ್ಗಟ್ಟಿನಿಂದ ಪಕ್ಷವನ್ನು ಸಂಘಟಿಸಿ ಪಂಜಿಕಲ್ಲುನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವಂತೆ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರರವರು ಮಾತನಾಡಿ ಜಿಲ್ಲಾ ಪಂಚಾಯತ್‍ನಿಂದ ಕುಡಿಯುವ ನೀರಿನ ಸಂಬಂಧಪಟ್ಟಂತೆ ಈಗಾಗಲೇ ಅನುದಾನ ಒದಗಿಸಿದ್ದು ಇನ್ನು ಹೆಚ್ಚುವರಿ ಅನುದಾನವನ್ನು ಈ ಭಾಗಕ್ಕೆ ಒದಗಿಸುತ್ತೇನೆ ಎಂದು ತಿಳಿಸಿದ್ದರು. ಎಸ್.ವಿ.ಎಸ್ ಕಾಲೇಜು ನಿವೃತ್ತ ಪ್ರಾಧ್ಯಪಕರಾದ ನಾರಾಯಣ ಭಂಡಾರಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂಧರ್ಭದಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಗ್ರಾ.ಪಂ ಅಧ್ಯಕ್ಷೆ ಸುಮಿತ್ರ ಕೈಲಾರು, ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ ಗೌಡ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಚಿದಾನಂದ ಕುಲಾಲ್, ಕ್ಷೇತ್ರ ಕಾರ್ಯದರ್ಶಿಗಳಾದ ಪ್ರಕಾಶ್ ಅಂಚನ್, ರಮನಾಥ ರಾಯಿ, ಪಕ್ಷದ ಪ್ರಮುಖರಾದ ಕರುಣೇಂದ್ರ ಪೂಜಾರಿ, ಪಂಚಾಯತ್ ಸದಸ್ಯರಾದ ಪೂವಪ್ಪ ಮೆಂಡನ್,ದಯಾನಂದ ಗೌಡ, ಹರೀಶ್ ಪೂಜಾರಿ, ಬಾಲಕೃಷ್ಣ ಪೂಜಾರಿ, ರೂಪಶ್ರೀ, ಶಾಲಿನಿ, ಶಶಿಕಲಾ, ಬಿಜೆಪಿ ಬೂತ್ ಸಮಿತಿ ಪದಾಧಿಕಾರಿಗಳಾದ ಅಶೋಕ್, ಅನಂದ ಕೇಲ್ಡೋಡಿ, ಪ್ರವೀಣ್ ಅಮೈ, ಅಶ್ವಿನ್ ಕುಮಾರ್,ಕೆ.ಎನ್ ಶೇಖರ್, ಕೃಷ್ಣಪ್ಪ ಗೌಡ, ಜೋಕಿಂ ಮೇನಜಸ್, ಸದಾಶಿವ ಶೆಟ್ಟಿ, ಮತ್ತು ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳು ಉಪಸ್ಥಿತರಿದ್ದರು. ಮೋಹನ್‍ದಾಸ್ ಪಂಜಿಕಲ್ಲು ಕಾರ್ಯಕ್ರಮ ನಿರೂಪಿಸಿದರು.