ಜ.10ರಿಂದ 19ರವರೆಗೆ ಕರಾವಳಿ ಉತ್ಸವ….
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ ಸಮಿತಿಯ ವತಿಯಿಂದ ಈ ಬಾರಿಯ ಕರಾವಳಿ ಉತ್ಸವವು ಜ.10ರಿಂದ 19ರವರೆಗೆ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉತ್ಸುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.10ರಂದು ಕರಾವಳಿ ಉತ್ಸವದ ಉದ್ಘಾಟನೆ ನಡೆಯಲಿದ್ದು ಸಂಜೆ 3:30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ, 5:30ಕ್ಕೆ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತು ಪ್ರದರ್ಶನ ಉದ್ಘಾಟನೆ ಹಾಗೂ 6 ಗಂಟೆಗೆ ಕರಾವಳಿ ಉತ್ಸವದ ಉದ್ಘಾಟನೆ ನಡೆಯಲಿದೆ ಎಂದರು.
ಮೆರವಣಿಗೆಯನ್ನು ಹಾಗೂ ವಸ್ತು ಪ್ರದರ್ಶವನ್ನು ಸಚಿವ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು ಚಲನಚಿತ್ರ ನಟ ರಿಷಬ್ ಶೆಟ್ಟಿ ಉತ್ಸವವನ್ನು ಉದ್ಘಾಟನೆ ಮಾಡಲಿದ್ದಾರೆ.ಕದ್ರಿ ಮೈದಾನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಜ 17, 18, 19ರಂದು ಪಣಂಬೂರು ಬೀಚ್‌ನಲ್ಲಿ ಬೀಚ್ ಉತ್ಸವ, ಗಾಳಿಪಟ ಉತ್ಸವ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜಿ.ರೂಪಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.