ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸುದರ್ಶನ್ ಮೂಡುಬಿದ್ರೆ ಆಯ್ಕೆ…
ಮಂಗಳೂರು : ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುದರ್ಶನ್ ಮೂಡುಬಿದ್ರೆ ಆಯ್ಕೆಯಾಗಿದ್ದಾರೆ.
ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಭಾನುವಾರ ಚುನಾವಣೆ ನಡೆಸಿದ್ದು ಸುದರ್ಶನ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅವರು ಈ ಮೊದಲು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದರು.
ಬಿಜೆಪಿಯ ಹಾಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವರು ಅಧಿಕಾರವಧಿಯು ಕಳೆದ ಸೆಪ್ಟೆಂಬರ್‌ನಲ್ಲಿ ಕೊನೆಗೊಂಡಿದ್ದು ಅವರ ಅವಧಿಯಲ್ಲಿ ಬಿಜೆಪಿ ವಿಧಾನಸಭೆ ಚುನಾವಣೆ, ನಿಗಮ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಅದ್ಭುತ ಪ್ರಗತಿ ಸಾಧಿಸಿದೆ.
ಜನವರಿ 12 ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಬಿಜೆಪಿಯು ಸೂಚನೆ ನೀಡಿತ್ತು. ಬಿಜೆಪಿಯ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರನ್ನು ಈ ಚುನಾವಣೆಯ ಮೇಲುಸ್ತುವಾರಿ ನೀಡಲಾಗಿತ್ತು.