ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ……

ಮಂಗಳೂರು: ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಜ. 23 ರಂದು ನಡೆಯಿತು.
ಶ್ರೀನಿವಾಸ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಷನ್ ಆಫ್ ಕಂಪ್ಯೂಟರ್ ಎಂಜಿನಿಯೆರ್(ACE) ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ‘ ಸ್ವಚ್ಛ ಶ್ರೀನಿವಾಸ್- ಹಸಿರು ಶ್ರೀನಿವಾಸ್ ‘ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ನಾಲ್ಕನೇ ಸೆಮೆಸ್ಟರ್ ನ ವಿದ್ಯಾರ್ಥಿಗಳು ಹಾಗು ವಿಭಾಗದ ಉಪನ್ಯಾಸಕರು ಪಾಲ್ಗೊಂಡಿದ್ದರು.