ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ….
ಸುಳ್ಯ: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ
ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಗೆ ಕರ್ನಾಟಕ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನವು ಆಯ್ಕೆ ಆಗಿರುತ್ತದೆ.
ಈ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆಯುವ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರ ಅಧ್ಯಕ್ಷತೆ ಯಲ್ಲಿ ನಡೆಯುವ ಸಮಾರಂಭದಲ್ಲಿ ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರಿಂದ ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರು ಸ್ವೀಕರಿಸುವರು.