ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು – ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ…

ಪುತ್ತೂರು: ಕೇವಲ ಉದ್ಯೋಗ ಗಳಿಸುವುದಷ್ಟೇ ಕಲಿಕೆಯ ಗುರಿಯಾಗಿರಬಾರದು, ತಾನು ಗಳಿಸಿದುದರಲ್ಲಿ ಕೆಲವಂಶವನ್ನು ಸಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಾ ದೇಶದ ಉನ್ನತಿಗೂ ಕೊಡುಗೆಯನ್ನು ನೀಡಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ 2023ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪುನಶ್ಚೇತನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆಯ ಪ್ರಜ್ಞೆಯನ್ನು ಉದ್ದೀಪನಗೊಳಿಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಕರ್ತವ್ಯ ಹಾಗೂ ಜವಾಬ್ಧಾರಿಗಳನ್ನು ಅರಿತುಕೊಂಡು ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ವಿದ್ಯಾರ್ಥಿಗಳು ಸದಾ ಲವಲವಿಕೆಯಿಂದಿರಬೇಕು ಬಹಿರ್ಮುಖಿಯಾಗಿರಬೇಕು. ಕಾಲೇಜಿನಲ್ಲಿ ನಡೆಯುವ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.
ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಇಂಜಿನಿಯರಿಂಗ್ ಶಿಕ್ಷಣದ ಬಳಿಕ ದೊರಕುವ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕೇವಲ ಉದ್ಯೋಗ ಗಳಿಸುವುದೇ ಧ್ಯೇಯವಾಗಿರದೆ ಸ್ವಉದ್ಯೋಗದತ್ತಲೂ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ, ನಿರ್ದೇಶಕರಾದ ಸತ್ಯನಾರಾಯಣ ಭಟ್.ಬಿ, ಕಾಲೇಜಿನ ಉದ್ಯೋಗ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್, ವಿವಿಧ ವಿಭಾಗಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿಯರಾದ ಪ್ರೊ.ಶ್ರೀಶರಣ್ಯ.ಯು.ಆರ್ ಹಾಗೂ ಪ್ರೊ.ನಿಖಿಲಾ.ಟಿ ಕಾರ್ಯಕ್ರಮ ನಿರ್ವಹಿಸಿದರು.

fy3
fy7
Sponsors

Related Articles

Back to top button