ಫೆ. 15 – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ….
ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಫೆಬ್ರವರಿ 15 ಶನಿವಾರದಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರಾಜೇಶ್.ವೈ.ಎಚ್ ಹಾಗೂ ಕಸ್ಟಮ್ಸ್ ಮತ್ತು ಕೇಂದ್ರೀಯ ತೆರಿಗೆ ಇಲಾಖೆಯ ಮಂಗಳೂರು ವಿಭಾಗದ ಮೇಲ್ವಿಚಾರಕ ಶ್ರೀ.ದಿನೇಶ್ ಕುಂದರ್ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀ.ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ.ಪುನೀತ್.ಕೆ ಮತ್ತು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಕ್ರೀಡಾಕೂಟದ ಆರಂಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯುತ್ತದೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.