ಬಸ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಬಸ್ ಕೆಎಸ್‌ಆರ್‌ಟಿಸಿ ನಿರ್ವಾಹಕ ಬಂಧನ….

ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನು ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ನಿರ್ವಾಹಕನ ಕೈ ಚಳಕದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಆತನನ್ನು ಕರ್ತವ್ಯದಿಂದ ಅಮಾನತು ಮಾಡಿ, ಆತನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಮಹಿಳೆಯು ಈ ಬಸ್ಸಿಗೆ ಹಾಸನದಲ್ಲಿ ಹತ್ತಿದ್ದು ಇಸುಬು ಅಲಿ ಎಂಬ ನಿರ್ವಾಹಕ ಮಹಿಳೆಯ ಬಳಿ ಕುಳಿತುಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆಯು ಇದನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದ್ದು ವಿಡಿಯೋ ಗಮನಿಸಿದ ಕೆಎಸ್‌ಆರ್‌ಟಿಸಿ ಎಂ.ಡಿ. ನಿರ್ವಾಹಕನನ್ನು ಅಮಾನತು ಮಾಡಿ ತನಿಖೆಗೆ ಆದೇಶಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಈ ಹಿಂದೆ ಆರೋಪಿಯು ಧರ್ಮಸ್ಥಳ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಆ ಸಂದರ್ಭದಲ್ಲೂ ಮಹಿಳೆಯರಿಗೆ ಕಿರುಕುಳ ನೀಡಿದ್ದ ವಿಚಾರದಲ್ಲಿ ಸಂಘಟನೆಯವರಿಂದ ಹಲ್ಲೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ.