ಅಮೃತ ಸಾಹಿತ್ಯ ವೇದಿಕೆ ಅಧ್ಯಕ್ಷರಾಗಿ ಡಾ.ಮಾಲತಿ ಶೆಟ್ಟಿ ಮಾಣೂರು ಆಯ್ಕೆ….
ಮಂಗಳೂರು: “ಅಮೃತ ಪ್ರಕಾಶ” ಪತ್ರಿಕೆ ಸಾರಥ್ಯದಲ್ಲಿ ನಡೆಯುವ ಅಮೃತ ಸಾಹಿತ್ಯ ವೇದಿಕೆಯ ಅಧ್ಯಕ್ಷರಾಗಿ ಸಾಹಿತಿ, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದಾರೆ.
ಸಾಹಿತ್ಯ ವೇದಿಕೆಯ ಮೂಲಕ ಜಿಲ್ಲೆ ಹಾಗೂ ರಾಜ್ಯದಲ್ಲಿ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ, ವಿಚಾರಗೋಷ್ಠಿ, ಕೃತಿ ಬಿಡುಗಡೆ, ಕವಿಗೋಷ್ಠಿಗಳನ್ನು ನಿರಂತರವಾಗಿ ಸಾಹಿತ್ಯಪರ ಕಾರ್ಯಕ್ರಮ ಮಾಡುವ ಉದ್ದೇಶ ಹೊಂದಿದ್ದು ಪ್ರತೀ ರಾಜ್ಯ, ತಾಲೂಕು, ಜಿಲ್ಲೆಗಳಿಂದ ಪ್ರತಿನಿಧಿಗಳನ್ನು ಆಯ್ಕೆಮಾಡಲಾಗುವುದು. ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಪ್ರೀತಿ ಹುಟ್ಟಿಸುವ ಕಾರ್ಯಕ್ರಮ ನಿರಂತರವಾಗಿ ನಡೆಸಲಾಗುವುದು. ಇದರ ಗೌರವ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಸಂಘಟಕ, ಕ್ರಿಯಾತ್ಮಕ ಕಲಾ ನಿರ್ದೇಶಕ ಗಣೇಶ್ ರೈ ಬ್ರಹ್ಮಾವರ, ಉಪಾಧ್ಯಕ್ಷರಾಗಿ ಸಾಹಿತಿ, ನಟ ಕಾಸರಗೋಡು ಅಶೋಕ್ ಕುಮಾರ್ ಆಯ್ಕೆಯಾಗಿರುವರು. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಉಡುಪಿ, ಮೂಡಬಿದ್ರೆ, ಕಾರ್ಕಳ, ಕಾಸರಗೋಡು, ಬೆಂಗಳೂರು, ಮೈಸೂರು, ಮುಂಬೈ ಸೇರಿದಂತೆ ರಾಜ್ಯಾದಾದ್ಯಂತ ಎಲ್ಲಾ ಕಡೆಯ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಉಚಿತವಾಗಿ ಕಾರ್ಯಕ್ರಮ ನಡೆಸುವ ಉದ್ದೇಶವನ್ನು ಹೊಂದಿದೆ.