ಶ್ರೀರಾಮ ಪದವಿ ಕಾಲೇಜಿನಲ್ಲಿ “ಥಟ್ ಅಂತ ಹೇಳಿ” ಕಾರ್ಯಕ್ರಮ….
ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ ಕಲ್ಲಡ್ಕ ಇಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ “ಸ್ನೇಹ ಸಂಗಮ” ಕಾರ್ಯಕ್ರಮಕ್ಕೆ ಚಂದನ ವಾಹಿನಿಯ “ಥಟ್ ಅಂತ ಹೇಳಿ” ನಿರೂಪಕ ಡಾ| ನಾ. ಸೋಮೇಶ್ವರ ಆಗಮಿಸಿದ್ದರು.
ಇವರು ಪದವಿ ಕಾಲೇಜಿನಲ್ಲಿ ಪ್ರಾಚೀನ ಕರ್ನಾಟಕ ಮತ್ತು ಕನ್ನಡ ಎಂಬ ವಿಷಯದ ಕುರಿತು 15 ಸುತ್ತಿನ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಉಪನ್ಯಾಸಕರು ಹಾಗೂ ಸಾರ್ವಜನಿಕರ ವಿವಿಧ ಸ್ತರದ ಒಟ್ಟು 6 ತಂಡಗಳು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಭೌತಶಾಸ್ತ್ರ ಉಪನ್ಯಾಸಕಿ ಕವಿತಾ ಇವರು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷ ಡಾ ಪ್ರಭಾಕರ ಭಟ್ ಕಲ್ಲಡ್ಕ, ಹಿರಿಯರಾದ ಕಮಲಾ ಪ್ರಭಾಕರ ಭಟ್, ಸಂಸ್ಥೆಯ ಅಧ್ಯಕ್ಷ ನಾರಾಯಣ ಸೋಮಯಾಜಿ, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಉಪಸ್ಥಿತರಿದ್ದರು.