ಫೆ. 29 – ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ….

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಫೆ.29 ಶನಿವಾರ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.
2018-19ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.
ಪ್ರತಿ ವಿಭಾಗದಲ್ಲಿ ಮೊದಲಿಗರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಂಗಾರದ ಪದಕವನ್ನಿತ್ತು ಗೌರವಿಸಲಾಗುವುದು. ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಸಿಂದೂರ ಸರಸ್ವತಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಅಂದು ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಉಡುಪಿಯ ಅದಾನಿ ಯುಪಿಸಿಎಲ್ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ತಿಳಿಸಿದ್ದಾರೆ.