ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ – ನೂತನ ಪದಾಧಿಕಾರಿಗಳ ಆಯ್ಕೆ…

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ ಅವರ
ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾಸಭೆಯಲ್ಲಿ 2020-21 ನೇ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಮುಂಡೋಕಜೆ, ಕಾರ್ಯದರ್ಶಿಯಾಗಿ ಗಣೇಶ್‌ ಮಾವಂಜಿ, ಕೋಶಾಧಿಕಾರಿಯಾಗಿ ದಯಾನಂದ ಕೊರತ್ತೋಡಿ, ಗೌರವಾಧ್ಯಕ್ಷರಾಗಿ ಕೃಷ್ಣ ಬೆಟ್ಟ ಹಾಗೂ ನಿರ್ದೇಶಕರುಗಳು, ಸಲಹೆಗಾರರನ್ನು ಆಯ್ಕೆ ಮಾಡಲಾಯಿತು.
ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವರದಿ ವಾಚಿಸಿದರೆ, ಕೋಶಾಧಿಕಾರಿ ಲೋಕೇಶ್‌ ಗುಡ್ಡೆಮನೆ ಲೆಕ್ಕಪತ್ರ ಮಂಡಿಸಿದರು.
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್‌ ಪೆರ್ಲಂಪಾಡಿ, ಸಂಘದ ಗೌರವಾಧ್ಯಕ್ಷ ಮುರಳೀಧರ
ಅಡ್ಡನಪಾರೆ ವೇದಿಕೆಯಲ್ಲಿದ್ದರು.

Related Articles

Back to top button