ಕಂಪೌಂಡ್ ಕುಸಿತ- ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವು….
ಮಂಗಳೂರು : ಕಂಪೌಂಡ್ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಬಂಟ್ಸ್ ಹಾಸ್ಟೆಲ್‌ನ ಕರಂಗಲ್ಪಾಡಿ ಜಂಕ್ಷನ್ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ಕಾರ್ಮಿಕರನ್ನು ಬಾಗಲ್‌ಕೋಟೆಯ ಬಿಮೇಶ್ ಹಾಗೂ ಬೆಂಗಾಲ ಮೂಲದ ಮುಝ್ರಿಕುಲ್ ಎಂದು ಗುರುತಿಸಲಾಗಿದೆ. ಹಾಗೆಯೇ ಹನಿಕುಲ್ ಎಂಬ ಓರ್ವ ಕಾರ್ಮಿಕ ಗಾಯಗೊಂಡಿದ್ದು ಆತನನ್ನು ಯೆನಪೋಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮಣ್ಣಿನಡಿ ಇನ್ನೂ ಮೂವರು ಸಿಲುಕಿದ್ದಾರೆನ್ನಲಾಗಿದೆ.
ಪಾಂಡೇಶ್ವರ ಹಾಗೂ ಕದ್ರಿಯ ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಅವರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದು, ಈ ಘಟನೆಯಿಂದಾಗಿ ದುಖಃವಾಗಿದೆ. ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.