ಕೊರೊನಾ ಆತಂಕದಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್..
ಮಂಗಳೂರು: ಕೊರೋನಾ ವೈರಸ್ ಸೋಂಕು ಭಾರತದಲ್ಲೂ ಆತಂಕ ಸೃಷ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ಏರ್‌ಪೋರ್ಟಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ವೈರಸ್ ಬರದಂತೆ ತಡೆಗಟ್ಟಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಯಂತ್ರಗಳನ್ನು ಅಳವಡಿಸಲಾಗಿದೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೌದಿ ರಾಷ್ಟ್ರಗಳಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಕರಾವಳಿಗರು ಹೆಚ್ಚಿರುವ ಕುವೈತ್,ದುಬೈ , ಓಮನ್, ಬಹರೈನ್ ನಲ್ಲಿ ಸೋಂಕು ಹಬ್ಬಿರುವ ಕಾರಣ ಅಲ್ಲಿಂದ ಇಲ್ಲಿಗೆ ಪ್ರಯಾಣಿಸುವ ಸಂಖ್ಯೆಯೂ ಹೆಚ್ಚಿದೆ. ಈ ಹಿನ್ನಲೆಯಲ್ಲಿ ದುಬೈ ಸೇರಿದಂತೆ ಎಲ್ಲಾ ದೇಶಗಳಿಂದ ಬರುವ ವಿಮಾನದಲ್ಲಿ ಹೆಚ್ಚುವರಿ ತಪಾಸಣೆ ಮಾಡಲಾಗುತ್ತಿದ್ದು, ಹಡಗಿನ ಮೂಲಕ ಬರುವವರಿಗೂ ಸೂಕ್ತ ತಪಾಸಣೆ ನಡೆಸಲಾಗುತ್ತಿದೆ.
ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಐಸೋಲೇಟೆಡ್ ವಾರ್ಡ್ ನಿರ್ಮಾಣ ಮಾಡಲಾಗಿದೆ.