ಶ್ರೀರಾಮ ಪದವಿ ಕಾಲೇಜಿನಲ್ಲಿ “ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟ”ದ ಸಮಾರೋಪ….
ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇದರ ದಶಮಾನೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ “ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟ”ದ ಸಮಾರೋಪವು ಶ್ರೀರಾಮ ಪದವಿ ಕಾಲೇಜಿನ ಆವರಣದಲ್ಲಿ ನಡೆಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್ ಇದರ ಅಧ್ಯಕ್ಷ ಲಯನ್ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಇವರು ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹ ನಿರ್ದೇಶಕ ಡಾ ಪ್ರಸನ್ನ ಬಿ ಕೆ, ಕಾಲೇಜು ಅಭಿವೃದ್ಧಿ ಸಮಿತಿ ಇದರ ಅಧ್ಯಕ್ಷ ಶಶಿಧರ ಮಾರ್ಲ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಪೂರ್ಣಶ್ರೀ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಉಪಸ್ಥಿತರಿದ್ದರು.
ಪಂದ್ಯಾಟದ ಫಲಿತಾಂಶವು ಇಂತಿವೆ :- ಆಳ್ವಾಸ್ ಕಾಲೇಜು ಮೂಡುಬಿದಿರೆ ಪ್ರಥಮ ಸ್ಥಾನ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ದ್ವಿತೀಯ ಸ್ಥಾನ, ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ತೃತೀಯ ಸ್ಥಾನ, ಪೂರ್ಣಪ್ರಜ್ಞ ಕಾಲೇಜು ಉಡುಪಿ ಚತುರ್ಥ ಸ್ಥಾನ ಪಡೆದುಕೊಂಡಿರುತ್ತದೆ. ಅತ್ಯುತ್ತಮ ದಾಳಿಕೋರ ಪ್ರಶಸ್ತಿ ಸಲಿಯತ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಅತ್ಯುತ್ತಮ ಆಲ್‍ರೌಂಡರ್ ಪ್ರಶಸ್ತಿ ವೀಣಾ ಆಳ್ವಾಸ್ ಕಾಲೇಜು ಮೂಡುಬಿದಿರೆ, ಅತ್ಯುತ್ತಮ ಸೆಟ್ಟರ್ ಪ್ರಶಸ್ತಿ ಚರೀಷ್ಮಾ ಆಳ್ವಾಸ್ ಕಾಲೇಜು ಮೂಡುಬಿದಿರೆ, ಪಡೆದಿರುತ್ತಾರೆ. ಪಂದ್ಯಾಟದ ಫಲಿತಾಂಶ ವರದಿಯನ್ನು ವಿಟ್ಲ ಪ್ರಥಮದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ ರಾಮಚಂದ್ರ ಕೆ ಇವರು ವಾಚಿಸಿದರು.
ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕಿ ಶುಭಲತಾ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ್ ವಂದಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಕವಿತಾ ನಿರೂಪಿಸಿದರು.