ಡಾ.ಮಾಲತಿ ಶೆಟ್ಟಿ ಮಾಣೂರು – ಗಡಿನಾಡ ಧ್ವನಿ ಸಾಹಿತ್ಯಭೂಷಣ ಪ್ರಶಸ್ತಿಗೆ ಆಯ್ಕೆ…
ಬಂಟ್ವಾಳ: ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರುರವರು ಎಪ್ರಿಲ್ 4 ರಂದು ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ನೂತನ ಸಭಾಂಗಣದಲ್ಲಿ ನಡೆಯುವ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಗಾಗಿ ನೀಡುವ “ಗಡಿನಾಡ ಧ್ವನಿ ಸಾಹಿತ್ಯಭೂಷಣ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.
ಡಾ.ಮಾಲತಿ ಶೆಟ್ಟಿ ಮಾಣೂರು ಅವರು ಈಗಾಗಲೇ 9 ಕೃತಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ.ಕಳೆದ 6 ವರ್ಷಗಳಿಂದ “ಅಮೃತ ಪ್ರಕಾಶ”ಎಂಬ ಸದಭಿರುಚಿಯ ಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.ಪತ್ರಿಕೆ ವತಿಯಿಂದ ನಡೆಸುವ ಸರಣಿ ಕಾರ್ಯಕ್ರಮಗಳ ಮೂಲಕ ಈಗಾಗಲೇ ಇತರ ಸಾಹಿತಿಗಳ 23 ಕೃತಿಗಳನ್ನು ಬಿಡುಗಡೆಗೊಳಿಸಿದ್ದಾರೆ.ಭಾರತ ಜ್ಯೋತಿ, ರಾಷ್ಟ್ರೀಯ ವಿಭೂಷಣ ರಾಷ್ಟ್ರ ಪ್ರಶಸ್ತಿ ಯಂತಹ ಅನೇಕ ಪ್ರಶಸ್ತಿಗಳನ್ನು ಈಗಾಗಲೇ ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯಾರ್ಥಿ ಗಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಲು ಪತ್ರಿಕೆ ಯ ಸಾರಥ್ಯದಲ್ಲಿ ಸ್ವತಃ ಹುಟ್ಟುಹಾಕಿದ ಅಮೃತ ಸಾಹಿತ್ಯ ವೇದಿಕೆಯ ಅಧ್ಯಕ್ಷರಾಗಿದ್ದಾರೆ.ರಾಜ್ಯ,ಹೊರ ರಾಜ್ಯಗಳಲ್ಲಿ ಹಾಗೂ ರಾಷ್ಟ್ರಮಟ್ಟದ ಲ್ಲಿ ಸರಕಾರೀ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಾಗಿ ಸಾಹಿತ್ಯ ಅಭಿರುಚಿ ಬೆಳೆಸಲು ವಿವಿಧ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದ್ದಾರೆ.