ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ????…

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆನ್ನಲಾಗಿದೆ. ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ, ಸಿಂಧಿಯಾ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಜೊತೆಗೂಡಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿಂಧಿಯಾ, ಮಧ್ಯಪ್ರದೇಶ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಸಿಂಧಿಯಾ ಬಿಜೆಪಿ ಸೇರಿದರೆ ಚತುರ ಹಾಗೂ ಸಂಘನಾತ್ಮಕ ಚಾತುರ್ಯವುಳ್ಳ ನಾಯಕನೋರ್ವನನ್ನು ಕಾಂಗ್ರೆಸ್ ಕಳೆದುಕೊಳ್ಳಲಿದೆ.

ಇತ್ತ ಕಾಂಗ್ರೆಸ್ ನ 20 ಕ್ಕೂ ಹೆಚ್ಚು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಫ್ಯಾಕ್ಸ್ ಮೂಲಕ ಸ್ಪೀಕರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಲು ತುದಿಗಾಲ ಮೇಲೆ ನಿಂತಿದ್ದಾರೆ ಎನ್ನಲಾಗಿದೆ.
ಸಿಂಧಿಯಾಗೆ ಬೆಂಬಲ ಸೂಚಿಸಿರುವ ಈ 20ಕ್ಕೂ ಹೆಚ್ಚು ಶಾಸಕರು, ಯಾವುದೇ ಸಮಯದಲ್ಲೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲು ಸಜ್ಜಾಗಿದ್ದಾರೆ.ಒಟ್ಟಿನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಪ್ರಧಾನಿ ಮೋದಿ ಭೇಟಿ ಮಾಡಿರುವುದು ಯಾವುದೇ ಕ್ಷಣದಲ್ಲೂ ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಸಿಂಧಿಯಾ ಅಸಮಾಧಾನ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಸಿಂಧಿಯಾ ಅವರನ್ನು ಸಂಪರ್ಕಿಸುವ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ನೈಜ ಕಾಂಗ್ರೆಸ್ಸಿಗರಿಗೆ ಮಾತ್ರ ಕಾಂಗ್ರೆಸ್‌ನಲ್ಲಿರಲು ಸಾಧ್ಯ ಎಂದು ಸಿಂಗ್ ಹೇಳಿದ್ದಾರೆ.

Jyotiaditya Scindia 770x433 770x433 1 300x169

Related Articles

Leave a Reply

Your email address will not be published. Required fields are marked *