ಕೊರೊನಾ ಎಫೆಕ್ಟ್- ಒಂದು ವಾರ ಕರ್ನಾಟಕದಲ್ಲಿ ಎಲ್ಲಾ ಚಟುವಟಿಕೆಗಳು ಸ್ಥಗಿತ….
ಬೆಂಗಳೂರು: ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ ಮತ್ತು ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಕೊರೊನಾ ವೈರಸ್ ಕಾರಣದಿಂದ ರಾಜ್ಯದಲ್ಲಿ ಒಂದು ಸಾವು ಸಂಭವಿಸಿದ ಕಾರಣ ಹಾಗೂ ರಾಜ್ಯಾದ್ಯಂತ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಇಂದಿನಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಶಾಪಿಂಗ್ ಮಾಲ್, ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ಒಂದು ವಾರಗಳ ಕಾಲ ಮುಚ್ಚಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾತ್ರವಲ್ಲದೇ ಮುಂದಿನ 15 ದಿನಗಳವರೆಗೆ ವಿದೇಶ ಪ್ರವಾಸಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ರಾಜ್ಯದ ವಿಶ್ವ ವಿದ್ಯಾಲಯಗಳಿಗೆ 1 ವಾರ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿರುವ ಎಲ್ಲಾ ವಿಶ್ವವಿದ್ಯಾನಿಲಯಗಳಿಗೂ ಕೂಡ ಒಂದು ವಾರ ರಜೆಯನ್ನು ಘೋಷಿಸಲಾಗಿದೆ. ಜನರು ವಿವಿಧ ಭಾಗಗಳಿಗೆ ಪ್ರಯಾಣ ಮಾಡುವುದನ್ನು ಸಾಧ್ಯವಾದಷ್ಟೂ ಕಡಿಮೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರೂಪ್ಪ ಅವರು ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.