ಕೋರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಸಭೆ…

ಮಂಗಳೂರು : ಕೋರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಮುಂಜಾಗ್ರತಾ ಕ್ರಮಕ್ಕಾಗಿ ಸರ್ಕಾರ ಏನು ಕ್ರಮ ತೆಗೆದುಕೊಳ್ಳಲು ಹೇಳಿದೆ. ಏನೇನು ಕ್ರಮ ಆಗಿದೆ. ಕದ್ದುಮುಚ್ಚಿ ಏನು ಮಾಡಬೇಡಿ. ಸುಳ್ಳು ಹೇಳಬೇಡಿ. ಎಲ್ಲಾ ಮೀಡಿಯಾಗಳಲ್ಲಿ ಬಂದಿದೆ. ಈ ಸಭೆ ನಡೆಸಿರುವುದು ನಿಮ್ಮ ಬಳಿ ವರದಿ ಪಡೆದು ಸುಮ್ಮನೆ ಕುಳಿತುಕೊಳ್ಳಲು ಅಲ್ಲ, ಇದು ತುಂಬಾ ಸೀರಿಯಸ್‌‌‌ ಆದ ಸಭೆ‌‌‌‌. ಇಲ್ಲಿ ಸರಿಯಾದ ಚರ್ಚೆ ಆಗಬೇಕು ಎಂದು ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.
ಈ ಸಭೆಯಲ್ಲಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಶಾಸಕರು, ಉಸ್ತುವಾರಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಆರೋಗ್ಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

FB IMG 1584198244224 300x225

Related Articles

Leave a Reply

Your email address will not be published. Required fields are marked *