ಪಾಟೀಲ ಪುಟ್ಟಪ್ಪ ಆರೋಗ್ಯ ಸ್ಥಿತಿ ಗಂಭೀರ…..
ಹುಬ್ಬಳ್ಳಿ: ಕನ್ನಡ ಹೋರಾಟಗಾರ,ಹಿರಿಯ ಪತ್ರಕರ್ತ, ನಾಡೋಜ ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಫೆ.10ರಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ವಿಪರೀತ ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಆಯತಪ್ಪಿ ಬಿದ್ದ ಹಿನ್ನಲೆಯಲ್ಲಿ ತಲೆಗೆ ಪೆಟ್ಟಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಜ್ವರ ಕೂಡ ಕಾಣಿಸಿಕೊಂಡಿದೆ. ಇದಲ್ಲದೆ ಕಿಡ್ನಿ ತೊಂದರೆ, ರಕ್ತ ಹೀನತೆ ಹಾಗೂ ಸೋಂಕು ಕಂಡುಬಂದಿದ್ದು, ಎಲ್ಲಾ ಕಾಯಿಲೆಗೂ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ.