ಮಂಗಳೂರಿನಲ್ಲಿ ಕೊರೋನ ವೈರಸ್ ಟೆಸ್ಟಿಂಗ್ ಲ್ಯಾಬ್- ಸಚಿವ ಶ್ರೀರಾಮುಲು…..
ಮಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಗಂಟಲಿನ ದ್ರವದ ಮಾದರಿ ಪರೀಕ್ಷೆಗಾಗಿ ಟೆಸ್ಟಿಂಗ್ ಲ್ಯಾಬ್ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರಿನಲ್ಲಿ ಕೊರೊನಾ ಶಂಕಿತರ ಗಂಟಲು ದ್ರವ ಪರೀಕ್ಷಾ ಲ್ಯಾಬ್ ತೆರೆಯಲು ಸರ್ಕಾರ ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಯಲ್ಲಿ ಒಂದು ಟೆಸ್ಟಿಂಗ್ ಲ್ಯಾಬ್ ತೆರೆಯಲಾಗುವುದು ಎಂದು ಹೇಳಿದರು.
ಕರೋನಾ ವೈರಸ್ 150 ದೇಶಗಳಿಗೆ ಹರಡಿದ್ದು ಮತ್ತು ಜನರು ಭಯಭೀತರಾಗಿದ್ದಾರೆ. ಪ್ರಪಂಚದಾದ್ಯಂತ, COVID-19 ನಿಂದ ಪೀಡಿತ 6700 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 74,000 ಜನರು ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ, ನಮ್ಮಲ್ಲಿ 119 ಪ್ರಕರಣಗಳಿವೆ ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ, 13 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ 10 ಪ್ರಕರಣಗಳಿವೆ, ಅದರಲ್ಲಿ ಒರ್ವ ವ್ಯಕ್ತಿ ಕಲ್ಬುರ್ಗಿಯಲ್ಲಿ ಮೃತಪಟ್ಟಿದ್ದಾರೆ. ಕಲ್ಬುರ್ಗಿಯಲ್ಲಿ ಈಗ ಎರಡು ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಮತ್ತು ಕಲ್ಬುರ್ಗಿಯಲ್ಲಿನ ಎಲ್ಲಾ ಪ್ರಕರಣಗಳ ಮೇಲೆ ನಿಗಾ ಇಡಲಾಗುತ್ತಿದೆ ಎಂದ ಅವರು ರೈಲ್ವೇ ನಿಲ್ದಾಣಗಳಲ್ಲಿ ಇಂದಿನಿಂದ ನಿರಂತರವಾಗಿ ತಪಾಸಣೆ ಇರಲಿದ್ದು, ಬೀಚ್ ಗಳ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ ಎಂದರು.